ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಿರಿಯ ನಾಗರಿಕರ ವೇದಿಕೆ/ಸಂಘಗಳು–ಉಡುಪಿ ಜಿಲ್ಲೆ, ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘ, ಉಡುಪಿ ಜಿಲ್ಲಾ ಮಹಿಳಾ ಮಂಡಳಗಳ ಒಕ್ಕೂಟ (ರಿ.), ವೃದ್ಧಾಶ್ರಮಗಳು, ಉಡುಪಿ ಜಿಲ್ಲೆ ಹಾಗೂ ಕೆನರಾ ಬ್ಯಾಂಕ್, ಪ್ರಾದೇಶಿಕ ಕಛೇರಿ 1 ಮತ್ತು 2 ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ–2026 ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಹಿರಿಯ ನಾಗರಿಕರಿಗೆ “ಸ್ವಾಸ್ಥ್ಯ ಕಲೆ, ಏಕಪಾತ್ರಾಭಿನಯ & ಸಂಗೀತ ಧ್ವನಿ” ಕಾರ್ಯಕ್ರವು ಸೆಪ್ಟೆಂಬರ್ 28ರಂದು ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಮಾನ್ಯ ಸದಸ್ಯ ಕಾರ್ಯದರ್ಶಿಗಳಾದ ನಿತಿನ್ ಯಶ್ವಂತ್ ರಾವ್ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾನ್ಯ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ ಮಾತುಗಳನಾಡಿದರು. ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರೇಮ ಮೂರ್ತಿ ಕೆ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಒಕ್ಕೂಟದ ಸದಾನಂದ ಹೆಗ್ಡೆ, ಜಿಲ್ಲಾ ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷರಾದ ವಾಸಂತಿ ರಾವ್ ಕೊರಡ್ಕಲ್, ನಿವೃತ್ತ ಸಹಾಯಕ ನಿರ್ದೇಶಕರು ವಿಕಲಚೇತನ ಸಬಲೀಕರಣ ಇಲಾಖೆ ನಿರಂಜನ್ ಭಟ್, ಉಡುಪಿ ಜಿಲ್ಲಾ ಕೆನರಾ ಬ್ಯಾಂಕ್ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಹರೀಶ್ ಜಿ, ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಅಧ್ಯಕ್ಷರಾದ ಕೆ ಮುರುಳಿದರ್, ಉಡುಪಿ ಜಿಲ್ಲಾ ಹಿರಿಯ ನಾಗರಿಕರ ಒಕ್ಕೂಟ ಗೌರವಾಧ್ಯಕ್ಷರಾದ ಎಚ್ ವಿಶ್ವನಾಥ್ ಹೆಗ್ಡೆ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಹರಿಕೃಷ್ಣ ಶಿವತ್ತಾಯ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ವಿಶೇಷ ಶಿಕ್ಷಕ ಶಿಕ್ಷಕರೇತರ ಸಂಘದ ಅಧ್ಯಕ್ಷರಾದ ಎಚ್ ರವೀಂದ್ರ ನೆರವೇರಿಸಿದರು.

