ಹಣ ಪಣಕ್ಕಿಟ್ಟು ಕೋಳಿ ಅಂಕದ ಜೂಜಾಟ : ಓರ್ವನನ್ನು ವಶಕ್ಕೆ ಪಡೆದ ಪೊಲೀಸರು

0
19

ಬಂಟ್ವಾಳ : ಹಣವನ್ನು ಪಣಕ್ಕಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಅಕ್ಟೋಬರ್ 18ರಂದು ಸಂಜೆ ನಡೆದಿದೆ.

ಎರ್ಮುಡೆ ಪ್ರದೇಶದಲ್ಲಿ ಹಣವನ್ನು ಪಣಕ್ಕಿಟ್ಟು ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಹಲವರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ದಾಳಿಯ ಸಂದರ್ಭದಲ್ಲಿ ಬಂಟ್ವಾಳದ ಬಿ. ಮೂಡ ಗ್ರಾಮದ ಗಣೇಶ್ (33) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.