ಬ್ರಹ್ಮಾವರದಲ್ಲಿ ಮರೆವಿನ ಕಾಯಿಲೆ(ಡಿಮೆನ್ಷಿಯಾ) ವೈಜ್ಞಾನಿಕ ಶಿಬಿರ

0
19

ಬ್ರಹ್ಮಾವರ : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಭಾರತ ಸರ್ಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಮತ್ತು ಡಾ. ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಮರೆವಿನ ಕಾಯಿಲೆ (ಡಿಮೆನ್ಷಿಯಾ) ವೈದ್ಯಕೀಯ ಶಿಬಿರವನ್ನು ಅಕ್ಟೋಬರ್ 7ರಂದು ಬೆಳಿಗ್ಗೆ 10 ಗಂಟೆಗೆ ಬ್ರಹ್ಮಾವರದ ರೋಟರಿ ಸಭಾಭವನದಲ್ಲಿ ಆಯೋಜಿಸಲಾಯಿತು.

ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯ ಹಿರಿಯ ನಾಗರಿಕರ ಕ್ರಿಯಾ ಯೋಜನೆಯಡಿ ಈ ಶಿಬಿರ ನಡೆಯಿತು. ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ. ಬಸವರಾಜ್ ಹುಬ್ಬಳ್ಳಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷರಾದ ರೋ.ಎಚ್. ಪ್ರಮೋದ್ ಶೆಟ್ಟಿ ವಹಿಸಿದ್ದರು. ಉಡುಪಿ ಡಾ.ಎ.ವಿ. ಬಾಳಿಗ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ಪಿ.ವಿ ಭಂಡಾರಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ಲತಾ ನಾಯಕ್,ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವಿಜಯ ಲಕ್ಷೀ ಹೆರೂರು, ಬ್ರಹ್ಮಾವರ ರೋಟರಿ ಕ್ಲಬ್ ಕಾರ್ಯದರ್ಶಿ ರೋ. ಅರುಣ್ ಕುಮಾರ್, ಡಾ.ಎ.ವಿ ಬಾಳಿಗ ಹಾಸ್ಪಿಟಲ್ ನ ಡಾ. ಮಾನಸ್, ಕೆ.ಎಮ್.ಸಿ ಮಣಿಪಾಲದ ಡಾ. ಚಿತ್ರಾ, ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ರತ್ನ ಮತ್ತು ಸಿಬ್ಬಂದಿ ವರ್ಗ ಮುಂತಾದವರು ಉಪಸ್ಥಿತರಿದ್ದರು.