ಸಾರ್ವಜನಿಕ ಸ್ಥಳಗಳಲ್ಲಿ ಆತಂಕ ಸೃಷ್ಟಿಸುತ್ತಿದ್ದ ಅಪರಿಚಿತ ವ್ಯಕ್ತಿ ಆಸ್ಪತ್ರೆಗೆ ದಾಖಲು

0
1

ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಆತಂಕದ ವಾತಾವರಣ ಸೃಷ್ಟಿಸುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಬೀಡಿನಗುಡ್ಡೆ ಪಿಲಿಚಂಡಿ ದೈವಸ್ಥಾನದ ಸಮೀಪದಿಂದ ವಶಕ್ಕೆ ಪಡೆದು, ಬಳಿಕ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಸಂಬಂಧಪಟ್ಟ ವ್ಯಕ್ತಿಯು ಕಳೆದ ಕೆಲವು ದಿನಗಳಿಂದ ಉಗ್ರವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಆತಂಕಗೊಂಡ ಸ್ಥಳೀಯರು ಸಮಾಜಸೇವಕ ನಿತ್ಯಾನಂದ ಒಳಕಾಡುವರ ಗಮನಕ್ಕೆ ತಂದಿದ್ದರು. ಬಳಿಕ ಅವರು ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.

ವ್ಯಕ್ತಿಯ ಹೆಸರು ಹಾಗೂ ವಿಳಾಸ ತಿಳಿದುಬಂದಿಲ್ಲ. ಅವರು ಹೊರಜಿಲ್ಲೆಯವರಾಗಿರಬಹುದು ಎಂದು ಶಂಕಿಸಲಾಗಿದೆ. ವ್ಯಕ್ತಿಯ ವಾರಸುದಾರರು ಅಥವಾ ಕುಟುಂಬದ ಸದಸ್ಯರು ಉಡುಪಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.