ಸ್ಥಗಿತಗೊಂಡಿದ್ದ ತ್ಯಾಜ್ಯ ವಿಲೇವಾರಿ ವಾಹನಗಳ ದುರಸ್ತಿ ಪೂರ್ಣ

0
1

ಬಂಟ್ವಾಳ : ಬಂಟ್ವಾಳ ಪುರಸಭೆಯಲ್ಲಿ ಸ್ಥಗಿತಗೊಂಡಿದ್ದ ಎಲ್ಲಾ ತ್ಯಾಜ್ಯ ವಿಲೇವಾರಿ ವಾಹನಗಳನ್ನು ದುರಸ್ತಿಗೊಳಿಸಿ, ಸೋಮವಾರ ವಾಹನ ಪೂಜೆ ನೆರವೇರಿಸಲಾಯಿತು.

ಪುರಸಭೆಯ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಕಾರ್ಯಗಳನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಸ್ಥಗಿತಗೊಂಡಿದ್ದ ವಾಹನಗಳನ್ನು ದುರಸ್ತಿಗೊಳಿಸಲಾಗಿದೆ. ವಾಹನ ಪೂಜೆಯ ಬಳಿಕ ತ್ಯಾಜ್ಯ ವಿಲೇವಾರಿ ಕಾರ್ಯಗಳಿಗೆ ವಾಹನಗಳನ್ನು ಬಳಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.