ಬೆಳ್ಳಾರೆ ಪೊಲೀಸರ ಕಾರ್ಯಾಚರಣೆ : ಉಲಾಯಿ ಪಿದಾಯಿ ಜೂಜಾಟಕ್ಕೆ ಬ್ರೇಕ್

0
28

ಬೆಳ್ಳಾರೆ: ಸಾರ್ವಜನಿಕ ಸ್ಥಳದಲ್ಲಿ ಉಲಾಯಿ ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 20ರಂದು ಸಂಜೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಉಲಾಯಿ ಪಿದಾಯಿ ಜೂಜಾಟ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು.

ಮಾಹಿತಿಯ ಆಧಾರದ ಮೇಲೆ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ಡಿ.ಎನ್. ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.