ಪಲಿಮಾರು : ಪಲಿಮಾರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಗೃಹಲಕ್ಷ್ಮೀ ಫಲಾನುಭವಿಗಳ ಸಮಾವೇಶ ಹಾಗೂ ಪಂಚ ಗ್ಯಾರಂಟಿ ಸಂಭ್ರಮೋತ್ಸವ ಕಾರ್ಯಕ್ರಮವು ಅಕ್ಟೋಬರ್ 24ರ ಶನಿವಾರ ಬೆಳಿಗ್ಗೆ 10.30ಕ್ಕೆ ಪಲಿಮಾರು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಲಿದ್ದು, ಪಲಿಮಾರು ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಯಶವಂತ್ ಪಲಿಮಾರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರರು ಸುಧೀರ್ ಕುಮಾರ್ ಮರೋಳಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರು ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕರ್ನಾಟಕ ಸರ್ಕಾರದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ಚಂದ್ರ ಸುವರ್ಣ ಅಡ್ವೆ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೈ. ಸುಕುಮಾರ್, ಕೆಪಿಸಿಸಿ ಬೆಂಗಳೂರು ಸಂಯೋಜಕ ನವೀನ್ಚಂದ್ರ ಜೆ. ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಜಿತೇಂದ್ರ ಪುರ್ಟಾಡೋ, ಪಲಿಮಾರು ಹಿರಿಯ ಕಾಂಗ್ರೆಸ್ ಮುಖಂಡ ಗೋಪಾಲ ಪೂಜಾರಿ ಹಾಗೂ ಪಲಿಮಾರು ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಜಯ ಜೆ. ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಸಮಾವೇಶದ ಜೊತೆಗೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಂಭ್ರಮಾಚರಣೆಯೂ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಫಲಾನುಭವಿಗಳು ಭಾಗವಹಿಸುವಂತೆ ಪಲಿಮಾರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಮನವಿ ಮಾಡಿದ್ದಾರೆ.

