ನಿರ್ಮಾಣ ಕ್ಷೇತ್ರದಲ್ಲಿ ಹೊಸ ಆಶಯಗಳೊಂದಿಗೆ ಕಾರ್ಯಾರಂಭಿಸಿರುವ ಶ್ರೀ ಬಿರ್ತಿ ಗ್ರೂಪ್ ಕನ್ಸ್ಟ್ರಕ್ಷನ್ ಕಂಪನಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭವು
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು, ಹೆಬ್ರಿ ರಸ್ತೆಯ ವೆಸ್ಟ್ ಕೋಸ್ಟ್ ಕೆಮಿಕಲ್ಸ್ ಸಮೀಪ ಅಕ್ಟೋಬರ್ 18ರಂದು ನಡೆಯಿತು.
ನೂತನ ಸಂಸ್ಥೆಯನ್ನು ಉದ್ಘಾಟಿಸಿದ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಸಂಸ್ಥೆಗೆ ಶುಭ ಹಾರೈಸಿದರು.
ಸಂಸ್ಥೆಯ ಮಾಲೀಕರಾದ ಪ್ರಜ್ವಲ್ ಶೆಟ್ಟಿ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಸುಪ್ರಸಾದ್ ಶೆಟ್ಟಿ, ಯಶ್ವಂತ್ ಸುವರ್ಣ, ರಾಜು ಕುಲಾಲ್, ಪೃಥ್ವಿರಾಜ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಹಾಗೂ ಸಂದೀಪ್ ಶೆಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದು, ನೂತನ ಸಂಸ್ಥೆಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಿಜಯ್ ಶೆಟ್ಟಿ ಸಂಸ್ಥೆಯ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದರು. ಹಂಸರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.
