
ಇತಿಹಾಸ ಪ್ರಸಿದ್ಧ ಸಾವಿರಾರು ವರ್ಷಗಳ ಇತಿಹಾಸವಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಬೆಳ್ಮಣ್ಣು ಗ್ರಾಮದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ಥಳೀಯ ಪ್ರತಿಭೆಗಳಿಂದ ವಿವಿಧ ವೈವಿಧ್ಯಮಯ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ಪ್ರಧಾನ ಅರ್ಚಕರು, ಖ್ಯಾತ ಜ್ಯೋತಿಷ್ಯರಾದ ವೇದಮೂರ್ತಿ ಶ್ರೀ ಬಿ.ಕೆ. ವಿಘ್ನೇಶ್ ಭಟ್ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀಧರ್ ಭಟ್, ಸತೀಶ್ ಭಟ್, ತಂತ್ರಿಗಳಾದ ರಾಮ ತಂತ್ರಿ ಮೊದಲಾದವರು ಉಪಸ್ಥಿತರಿದ್ದರು.
ಬೆಳ್ಮಣ್ಣು ಕಾವೇರಿ ಬಿಲ್ಡರ್ ಮಾಲಕರಾದ ಎನ್.ಎಂ. ಹೆಗಡೆಯವರು ಕಾರ್ಯಕ್ರಮ ನಿರೂಪಿಸಿದರು
