ಕುಮಾರಿ ರಿಷಿಕಾ ಕೂಲಂಬಿ “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ

0
12

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಕರ್ನಾಟಕ 71ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವಂಬರ್ 15 ರಂದು ಭಾನುವಾರ ನಗರದ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ಸವಿತಾ ವಿಜಯ ಕೂಲಂಬಿ “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಕುಮಾರಿ ರಿಷಿಕಾ ಕೂಲಂಬಿಯವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸೇವೆಯನ್ನು ಗುರುತಿಸಿ ಈ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷö್ಮಣ್ ರಾಯ್ಕರ್ ಪ್ರಕಟಿಸಿದ್ದಾರೆ. ಕಲಾಕುಂಚದ ಸರ್ವ ಸದಸ್ಯರು, ಪದಾಧಿಕಾರಿಗಳು ಇವರಿಗೆ ಅಭಿಮಾನದಿಂದ ಅಭಿನಂದಿಸಿ ಶುಭ ಹಾರೈಸಿದ್ದಾರೆ.