ಮಂಗಳೂರು ವಿಶ್ವವಿದ್ಯಾನಿಲಯ ಅಂತರಕಾಲೇಜು ಪುರುಷರ ಫುಟ್‌ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

0
14

ಶ್ರೀ ಮಹಾವೀರ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರಕಾಲೇಜು ಪುರುಷರ ಫುಟ್‌ಬಾಲ್ ಪಂದ್ಯಾಟದ ಉಡುಪಿ ವಲಯದ ಸ್ಪರ್ಧೆಗಳ ಸಮಾರೋಪ ಸಮಾರಂಭ  ನಡೆಯಿತು.

ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿತು. ಕುಂದಾಪುರದ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ದ್ವಿತೀಯ ಸ್ಥಾನ, ಬಾರ್ಕೂರಿನ ಎಸ್.ಆರ್.ಎಂ.ಎನ್.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಸ್ಥಾನ ಹಾಗೂ ಕುಂದಾಪುರದ ಬಿ.ಬಿ. ಹೆಗ್ಡೆ ಕಾಲೇಜು ಚತುರ್ಥ ಸ್ಥಾನ ಪಡೆದುಕೊಂಡವು.

ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಶ್ರೀ ಮಹಾವೀರ ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸುಚರಿತ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಮೂಡಬಿದಿರೆ ಪಶುವೈದ್ಯಾಧಿಕಾರಿ ಡಾ. ಬಸವನಗೌಡ ಉಪಸ್ಥಿತರಿದ್ದರು.

ಪಂದ್ಯಾಟದ ವೀಕ್ಷಕರಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಮಧು ಅವರು ಪಂದ್ಯಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ಪಂದ್ಯಾಟಗಳಲ್ಲಿ ಭಾಗವಹಿಸಲಿರುವ ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಅಕ್ಷಿತ್ ರೈ ಉಪಸ್ಥಿತರಿದ್ದರು.