ಸಾಮೂಹಿಕ ಗುರುಪೂಜೆ, ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮ

ಕಾರ್ಕಳ : ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯ ಅಂಗವಾಗಿ ಸಾಮೂಹಿಕ ಗುರುಪೂಜೆ, ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮವು ಅಕ್ಟೋಬರ್ 25ರಂದು ಭಾನುವಾರ ಬಜಗೋಳಿಯ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 8.30ರಿಂದ 9.30ರವರೆಗೆ ಶ್ರೀ ಗುರು ಭಕ್ತ ವೃಂದದವರಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 9.30ರಿಂದ 10 ಗಂಟೆಯವರೆಗೆ ಪುರೋಹಿತರಾದ ಹರೀಶ್ ಶಾಂತಿಯವರ ನೇತೃತ್ವದಲ್ಲಿ ಸಾಮೂಹಿಕ ಗುರುಪೂಜೆ ನೆರವೇರಲಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮ ಜರುಗಲಿದೆ. ಬಳಿಕ ಪ್ರಸಾದ ವಿತರಣೆ ಮತ್ತು ಸಹಭೋಜನ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಆರು ಗ್ರಾಮಗಳ ಸಮಾಜ ಬಾಂಧವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಶಾಸಕರಾದ ವಿ. ಸುನೀಲ್ ಕುಮಾರ್ ಉದ್ಘಾಟಿಸಲಿದ್ದು, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭಾಸ್ಕರ್ ಎಸ್. ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ನವದೆಹಲಿಯ ಓಷ್ಯನ್ ಪರ್ಲ್ ಗ್ರೂಪ್ ಆಫ್ ಹೋಟೆಲ್ನ ಪ್ರವರ್ತಕರಾದ ಜಯರಾಮ್ ಬನಾನ್ ಅವರು ವಿದ್ಯಾರ್ಥಿವೇತನ ವಿತರಿಸಲಿದ್ದಾರೆ. ಟಾಕೀಸ್ ಆ್ಯಪ್ ಒಟಿಟಿಯ ಪ್ರೋಗ್ರಾಮಿಂಗ್ ಹೆಡ್ ಸ್ಮಿತೇಶ್ ಎಸ್. ಬಾರ್ಯ ಅವರು ಗುರುಸಂದೇಶ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಬಿಲ್ಲವ ಮಹಾಮಂಡಲ ಮುಲ್ಕಿಯ ಉಪಾಧ್ಯಕ್ಷರಾದ ಹರೀಶ್ ಡಿ. ಸಾಲ್ಯಾನ್, ಸಂಘದ ಗೌರವಾಧ್ಯಕ್ಷರಾದ ಅನಿಲ್ ಎಸ್. ಪೂಜಾರಿ, ಗೌರವ ಸಲಹೆಗಾರರಾದ ಅಶೋಕ್ ಪೂಜಾರಿ, ಮಹಿಳಾ ಅಧ್ಯಕ್ಷರಾದ ರಕ್ಷಿತಾ ಎಸ್. ಬಂಗೇರ ಹಾಗೂ ಯುವ ವೇದಿಕೆ ಅಧ್ಯಕ್ಷರಾದ ಸಂತೋಷ್ ಬಂಗೇರ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
2025-26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಹಾಗೂ ಅಂತಿಮ ಪದವಿ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಸಂಘ ನಿರ್ಧರಿಸಿದೆ. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಗ್ರಾಮ ಸಮಿತಿಯ ಅಧ್ಯಕ್ಷರ ಶಿಫಾರಸು ಪತ್ರದೊಂದಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿತ್ತು.
ಹೆಚ್ಚಿನ ಮಾಹಿತಿಗಾಗಿ: 8073256537. ಸಂಘದ ಸಂಪರ್ಕ ಸಂಖ್ಯೆಗಳು: 9850445416, 9845301298
