2028ರ‌ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ : ಮಾಜಿ ಶಾಸಕ ರಘುಪತಿ ಭಟ್

0
34

ಉಡುಪಿ : 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಬಿಜೆಪಿ ಕರೆದರೆ ಹೋಗುತ್ತೇನೆ. ಇಲ್ಲದಿದ್ದರೆ ಪಕ್ಷೇತರನಾಗಿಯಾದರೂ ಸ್ಪರ್ಧಿಸುತ್ತೇನೆ ಎಂದು ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆಯ ಬಗ್ಗೆಯೂ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾವ ಪಕ್ಷದಿಂದ ಕಣಕ್ಕಿಳಿಯಬೇಕು ಎಂಬುದರ ಕುರಿತು ಅಭಿಮಾನಿಗಳು ಮತ್ತು ಕಾರ್ಯಕರ್ತರ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿದರೂ ಗೆಲ್ಲುವಂತೆ ಪಕ್ಷವನ್ನು ಸಂಘಟಿಸಿ ಕೆಲಸ ಮಾಡಿದ್ದೇನೆ. ಬಿಜೆಪಿಗೆ ನನ್ನನ್ನು ಆಹ್ವಾನಿಸಿದರೆ ಯಾರ ಅಭಿಪ್ರಾಯವನ್ನೂ ಕೇಳುವ ಅಗತ್ಯವಿಲ್ಲ. ಅವರೆಲ್ಲರೂ ನಮ್ಮವರೇ. ಬಿಜೆಪಿ ಕರೆದರೆ ಪಕ್ಷಕ್ಕೆ ಮರಳುತ್ತೇನೆ. ಆದರೆ, ಇದುವರೆಗೆ 4 ಯಾರೂ ನನ್ನನ್ನು ಮಾತನಾಡಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದವರು ಬೇರೆ ಪಕ್ಷಗಳಿಗೆ ಹೋಗಿರುವ ಉದಾಹರಣೆಗಳಿವೆ.

ಮುಖ್ಯಮಂತ್ರಿಗಳಾಗಿದ್ದವರೇ ಪಕ್ಷ ಬದಲಾಯಿಸಿಲ್ಲವೇ ಎಂದು ಪ್ರಶ್ನಿಸಿದರು.