ವ್ಯಕ್ತಿ ನಾಪತ್ತೆ : ಪತ್ತೆಗೆ ಪೊಲೀಸರ ಮನವಿ

0
62

ಉಡುಪಿ : ಕೂಲಿ ಕೆಲಸಕ್ಕಾಗಿ ಹೆಬ್ರಿಯಿಂದ ಕಾರ್ಕಳಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಮಾರ್ಗಮಧ್ಯೆ ಬಸ್‌ನಿಂದ ಇಳಿದ ಬಳಿಕ ನಾಪತ್ತೆಯಾಗಿದ್ದಾರೆ. ಈವರೆಗೂ ಅವರ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ನಾಪತ್ತೆಯಾದ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮುತ್ತಲಪೂರ ನಿವಾಸಿ ಭರಮಪ್ಪ ಹನುಮಂತಪ್ಪ ಗೋಡೆರ (51) ಎಂದು ಗುರುತಿಸಲಾಗಿದೆ.

ಇವರು ಸುಮಾರು 5 ಅಡಿ 5 ಇಂಚು ಎತ್ತರವಿದ್ದು, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹಾಗೂ ಕೋಲು ಮುಖ ಹೊಂದಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಭರಮಪ್ಪ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ಅಥವಾ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸುವಂತೆ ಹೆಬ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಮನವಿ ಮಾಡಿದ್ದಾರೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು:

  • ಹೆಬ್ರಿ ಪೊಲೀಸ್ ಠಾಣೆ: 08253-251116
  • ಹೆಬ್ರಿ ಪಿಎಸ್‌ಐ ಮೊಬೈಲ್: 9480805463
  • ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ: 08258-23108
  • ಕಾರ್ಕಳ ವೃತ್ತ ನಿರೀಕ್ಷಕರ ಮೊಬೈಲ್: 9480805435

ಭರಮಪ್ಪ ಅವರ ಬಗ್ಗೆ ಮಾಹಿತಿ ತಿಳಿದಿರುವವರು ಮೇಲಿನ ದೂರವಾಣಿ ಸಂಖ್ಯೆಗಳ ಮೂಲಕ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.