ಮಹಿಳೆಗೆ ಹಣದ ಆಮಿಷವೊಡ್ಡಿ ಕಿರುಕುಳ ಆರೋಪ : ಪ್ರಕರಣ ದಾಖಲು

0
105

ವೇಣೂರು : ಸಾರ್ವಜನಿಕ ಸ್ಥಳದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 61 ವರ್ಷದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಶನಿವಾರ ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಕೆಲಸದಲ್ಲಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕೆ ಬಂದು, ಮಹಿಳೆಯೊಂದಿಗೆ ಸಾರ್ವಜನಿಕವಾಗಿ ಅಸಭ್ಯವಾಗಿ ಮಾತನಾಡಿ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ 2026ನೇ ಸಾಲಿನ ಪ್ರಕರಣ ಸಂಖ್ಯೆ 73/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989ರ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.