ಕಡಂದಲೆ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
68

ಡಿಸೆಂಬರ್ 5ರಂದು ಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ

ಕಡಂದಲೆ: ಇಲ್ಲಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಕ್ಟೋಬರ್ 24ರಂದು ಶಾಲಾ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ನ್ಯಾಯವಾದಿ ಕೆ. ಆರ್. ಪಂಡಿತ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ ವೃಂದ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಡಿಸೆಂಬರ್ 5ರಂದು ನಡೆಯಲಿರುವ 2026ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಲಾಯಿತು. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸುವ ನಿರ್ಧಾರ ಕೈಗೊಳ್ಳಲಾಯಿತು.
ಶಾಲೆಯ ಅಭಿವೃದ್ಧಿ ಹಾಗೂ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹಳೆ ವಿದ್ಯಾರ್ಥಿಗಳ ಸಹಕಾರ ಮಹತ್ವದ್ದಾಗಿದ್ದು, ವಾರ್ಷಿಕೋತ್ಸವವನ್ನು ಯಶಸ್ವಿಗೊಳಿಸಲು ಎಲ್ಲ ಹಳೆ ವಿದ್ಯಾರ್ಥಿಗಳು ಹಾಗೂ ಶಾಲಾಭಿಮಾನಿಗಳು ಸಹಕರಿಸುವಂತೆ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಮನವಿ ಮಾಡಿದ್ದಾರೆ.

ವರದಿ :ಜಗದೀಶ ಪೂಜಾರಿ ಕಡಂದಲೆ