ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಅಬ್ಬನಡ್ಕ ಬಳಿ ಗಿಡ ನೆಡುವ ಕಾರ್ಯಕ್ರಮ

0
22

ಭಾರತ ಸರಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಉಡುಪಿ ಮೈ ಭಾರತ್, ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಹಯೋಗದೊಂದಿಗೆ ” ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ” ಅಂಗವಾಗಿ ಅಬ್ಬನಡ್ಕದ ಬಳಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷರಾದ ದಿನೇಶ್ ಪೂಜಾರಿ ಬಿರೋಟ್ಟು, ಉಪಾಧ್ಯಕ್ಷ ಹರಿಣಿ ಪೂಜಾರಿ, ಕಾರ್ಯದರ್ಶಿ ಸುಭಾಷ್ ಕುಮಾರ್, ಕೋಶಾಧಿಕಾರಿ ಶ್ರೀಕಾಂತ್ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷರಾದ ಅಶ್ವಿನಿ ಬೋಳ, ಪೂರ್ವಾಧ್ಯಕ್ಷರಾದ ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಸತೀಶ್ ಪೂಜಾರಿ, ಸದಸ್ಯರಾದ ಹರೀಶ್ ಪೂಜಾರಿ, ಪ್ರದೀಪ್ ಸುವರ್ಣ, ಯೋಗೀಶ್ ಆಚಾರ್ಯ ಲಲಿತಾ ಆಚಾರ್ಯ, ಸಂಧ್ಯಾ ಶೆಟ್ಟಿ, ಲೀಲಾ ಪೂಜಾರಿ, ವೀಣಾ ಪೂಜಾರಿ, ಪುಷ್ಪ ಕುಲಾಲ್, ಸುಲೋಚನಾ ಕೋಟ್ಯಾನ್, ಅನ್ನಪೂರ್ಣ ಕಾಮತ್, ತ್ರಿವೇಣಿ ಶೆಟ್ಟಿ ಹಾಗೂ ಅಬ್ಬನಡ್ಕ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.