ಕೊಯಿಲ : ಎನ್ ಎಸ್ ಎಸ್ ವಾರ್ಷಿಕ ಶಿಬಿರಕ್ಕೆ ಚಾಲನೆ

0
10

ಬಂಟ್ವಾಳ : ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಮೂಲಕ ರಾಷ್ಟ್ರೀಯತೆ ಮತ್ತು ಸಾಮಾಜಿಕ ಕಳಕಳಿ ಜೊತೆಗೆ ನಾಯಕತ್ವ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ನಿವೃತ್ತ ಮುಖ್ಯಶಿಕ್ಷಕ ನಾರಾಯಣ ನಾಯಕ್ ಕರ್ಪೆ ಹೇಳಿದ್ದಾರೆ.

ಇಲ್ಲಿನ ಸಿದ್ದಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಕೊಯಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆರಂಭಗೊಂಡ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸಲಹೆಗಾರ ಜಗದೀಶ್ ಕೊಯಿಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ವೃದ್ಧಿ ಜೊತೆಗೆ ಶ್ರಮದಾನ ಮೂಲಕ ಶಾಲೆಯ ಅಭಿವೃದ್ಧಿಯೂ ಸಾಧ್ಯವಾಗುತ್ತದೆ ‘ ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಅಜೆಕ್ಕಳ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತ ಮೋಹನ್ ಕೆ. ಶ್ರೀಯಾನ್ ರಾಯಿ, ಭೂನ್ಯಾಯ ಮಂಡಳಿ ಸದಸ್ಯ ದಿನೇಶ್ ಶೆಟ್ಟಿಗಾರ್, ಸೈನಿಕ ಶ್ರೀಧರ ಅಂಚನ್ ಅಮೈ, ಮುಖ್ಯಶಿಕ್ಷಕಿ ಭಾರತಿ ವೇದಾನಂದ ಕಾರಂತ ಶುಭ ಹಾರೈಸಿದರು.

ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ,  ಸದಸ್ಯ ಹರಿಪ್ರಸಾದ್ ಶೆಟ್ಟಿ ಕುರುಡಾಡಿ,  ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್ ಕುಮಾರ್, ಉದ್ಯಮಿ ರಾಜೇಶ್ ಆಚಾರ್ಯ ಪಟ್ರಾಡಿ,  ಯೋಜನಾಧಿಕಾರಿ ಡಾ.ಹರಿಣಾಕ್ಷಿ, ಡಾ. ಅಭಿನಂದನ್ ಹಾಗೂ ಉದ್ಯಮಿ ಅನಿಲ್ ಪ್ರಭುರಾಯಿ ಮತ್ತಿತರರು ಇದ್ದರು.

ಶಿಬಿರ ನಾಯಕ ಲತೀಶ್ ಸ್ವಾಗತಿಸಿ, ಉಪನ್ಯಾಸಕ ಪ್ರೊ. ಹರಿಪ್ರಸಾದ್ ಬಿ. ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಶಿಬಿರಾರ್ಥಿ ಸ್ವಾತಿ ವಂದಿಸಿದರು. ಪ್ರಿಯದರ್ಶಿನಿ ಕಾರ್ಯಕ್ರಮ ನಿರೂಪಿಸಿದರು.