
ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರ್ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಜರಗಲಿರುವ 14ನೇ ವರ್ಷದ ಸಾರ್ವಜನಿಕ ಗೋಪೂಜಾ ಉತ್ಸವದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟವು ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸದಾನಂದ ನಾಯಕ್ ನಲ್ಕೂರು ಬೆಳೆಂಜಾಲೆ ಇವರು ವಹಿಸಿದ್ದರು.ತುಳು ರಂಗಭೂಮಿ ಕಲಾವಿದ ಮತ್ತು ನಾಟಕ ನಿರ್ದೇಶಕರಾದ ಪ್ರಭಾಕರ ಆಚಾರ್ಯ ಇವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.ಬಜರಂಗದಳ ಕಾಪು ಪ್ರಖಂಡ ಸಂಚಾಲಕರಾದ ಆನಂದ, ವಿಶ್ವ ಹಿಂದೂ ಪರಿಷದ್ ಮಟ್ಟಾರ್ ಇದರ ಅಧ್ಯಕ್ಷರಾದ ಸುರೇಶ ಆಚಾರ್ಯ, ಮಾತೃಶಕ್ತಿ ಪ್ರಮುಖ್ ಸುಮತಿ ಸಾಲ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಯಪ್ರಕಾಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು. ವಿವಿಧ ವಿಭಾಗಗಳಲ್ಲಿ ಸ್ಫರ್ಧೆಗಳು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು,ಕ್ರೀಡಾಭಿಮಾನಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
