-ಮಂದಾರ ರಾಜೇಶ್
ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಸುಂದರ ನದೀತೀರದಲ್ಲಿ ನೆಲೆಸಿರುವ ಪುಣ್ಯಭೂಮಿ ಬಲ್ಲಂಗೇರಿ ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಮುಂಬರುವ 2027ರ ಫೆಬ್ರವರಿ 10ರಂದು ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದೆ.
ಧಾರ್ಮಿಕ ಮಹೋತ್ಸವದ ಯಶಸ್ಸಿಗೆ ಸಾರ್ವಜನಿಕರು ಹಾಗೂ ಭಕ್ತಾದಿಗಳಿಂದ ಹೆಚ್ಚಿನ ಸಹಕಾರ ಅಗತ್ಯವಿದೆ ಎಂದು ಕರುಣಾಕರ ಬಡ ಕೋಡಿ ತಿಳಿಸಿದ್ದಾರೆ
ಕ್ಷೇತ್ರದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಬೆಳ್ತಂಗಡಿ ಕ್ಷೇತ್ರದ ಶಾಸಕರು ಸುಮಾರು ₹50 ಲಕ್ಷ ಅನುದಾನವನ್ನು ಬಿಡುಗಡೆ ಮಾಡಿ ಬೆಂಬಲಿಸಿದ್ದಾರೆ ಎಂದು ಜಸ್ಟ್ ನೌ ಎಂಬ ಯುಟ್ಯೂಬ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದು…
ಇದರೊಂದಿಗೆ ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಆರಾಧನಾ ಸಮಿತಿಯ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಭಕ್ತಾದಿಗಳು ಶ್ರಮದಾನ ಸೇರಿದಂತೆ ತಮ್ಮದೇ ರೀತಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ.
ನದೀತೀರದ ಈ ಪವಿತ್ರ ಕ್ಷೇತ್ರದಲ್ಲಿ ನಡೆಯಲಿರುವ ಅಪರೂಪದ ಧಾರ್ಮಿಕ ಕಾರ್ಯಕ್ರಮದಲ್ಲಿ ಸರ್ವ ಭಕ್ತಾದಿಗಳು ತನು-ಮನ-ಧನಗಳಿಂದ ಸಹಕರಿಸಿ, ಸೂರ್ಯನಾರಾಯಣ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.

