
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ
ಅಕ್ಟೋಬರ್ 25 ಭಾನುವಾರ ಬೊಳಂತಿಮೊಗೆರು ಶಾಲಾ ಸಭಾಭವನದಲ್ಲಿ ಜರಗಿತು.
ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಕೃಷ್ಣಯ್ಯ ಬಲ್ಲಾಳ್ ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ ಭಾಗದ ಜನತೆ ಸ್ವಾವಲಂಬಿಯಾಗಲು ಸಹಕಾರಿಯಾಗಿದೆ ಎಂದರು.
ಒಕ್ಕೂಟದ ಅಧ್ಯಕ್ಷರಾದ ಹರೀಶ್ ವಿ ಮಾಡ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಒಕ್ಕೂಟದ ಜವಾಬ್ದಾರಿಗಳ ಹಸ್ತಾಂತರವನ್ನು ನೆರವೇರಿಸಿ ಮಾತನಾಡಿ ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯ ಯೋಜನೆಗಳು ಅನುಷ್ಠಾನಗೊಳಿಸಲು ಪದಾಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ, ಒಕ್ಕೂಟದ ಪ್ರಗತಿಗೆ ಹಾಗೂ ಸದಸ್ಯರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯಾಗಲು ಸಹಕಾರ ನೀಡಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಸರಕಾರಗಳು ಮಾಡದಂತ ಕೆಲಸವನ್ನು ವೀರೇಂದ್ರ ಹೆಗ್ಗಡೆ ದಂಪತಿಗಳು ತಮ್ಮ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ಮೂಲಕ ಮಾಡಿಕೊಂಡು ಸ್ವಾಸ್ಯ ಸಮಾಜ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನಾಲ್ಕು ಮಂದಿ ಹಿರಿಯ ಸದಸ್ಯರುಗಳನ್ನು ಗೌರವಿಸಲಾಯಿತು. ಉತ್ತಮ ಸಂಘವನ್ನು ಗುರುತಿಸಿ ಗೌರವಿಸಲಾಯಿತು. ನಿಕಟಪೂರ್ವ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಬೊಳಂತಿಮೊಗೆರು ಶಾಲಾ ಮುಖ್ಯ ಶಿಕ್ಷಕ ಇಸ್ಮಾಯಿಲ್, ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ, ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಿಮಾನ್, ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ, ವೀರಪ್ಪ ಗೌಡ, ಮಾಮೇಶ್ವರ,ನೂತನ ಅಧ್ಯಕ್ಷ ಪುರಂದರ ಕೈಂತಿಲ, ಉಪಸ್ಥಿತರಿದ್ದರು.
ಸ್ವಾಗತ :ಕಲ್ಲಡ್ಕ ವಲಯದ ಮೇಲ್ವಿಚಾರಕರ ಶುಖರಾಜ್, ಸ್ವಾಗತಿಸಿದರು. ಒಕ್ಕೂಟ :ಸೇವಾ ಪ್ರತಿನಿದಿ ಯಶೋಧ, ವರದಿ ವಾಚಿಸಿದರು. ಸುಮಲತಾ ವಂದಿಸಿದರು.ಪುರಂದರ ಕಾರ್ಯಕ್ರಮ ನಿರೂಪಿಸಿದರು.
ಪದಗ್ರಹಣ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.
