
ವಾಲ್ಮೀಕಿ ಜಯಂತಿಯ ಪರ್ವಕಾಲದ ಅಂಗವಾಗಿ ಸಜಿಪನಡು ಶ್ರೀ ಕ್ಷೇತ್ರದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಕಥಾ ಪೂಜೆಯು ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಪೂಜಾ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ. ರಾಧಾಕೃಷ್ಣ ಆಳ್ವ, ಸುಧಾಕರ ಕೆ.ಟಿ., ಪ್ರದೀಪ್ ಭಂಡಾರಿ, ಸುಭಾಷ್ ಶೆಟ್ಟಿ, ಕಿಶನ್ ಸೇಣವ, ಸೋಮನಾಥ ಮೊದಲಾದವರು ಉಪಸ್ಥಿತರಿದ್ದರು.
ಸಾಮೂಹಿಕ ಪೂಜೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಕಾರ್ಯಕ್ರಮವು ಭಕ್ತಿಭಾವದ ವಾತಾವರಣದಲ್ಲಿ ನಡೆಯಿತು.
