ಉಡುಪಿ : ನಿಟ್ಟೂರಿನ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್ಗಳನ್ನು ಇಳಿಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ರಿಕ್ಷಾ ಚಾಲಕ ಸುನಿಲ್ ಬೈಲಕೆರೆ (45) ಮೃತಪಟ್ಟಿದ್ದಾರೆ.
ಕೃಷ್ಣಮಠದ ಪರಿಸರದ ನಿವಾಸಿಯಾಗಿದ್ದ ಸುನಿಲ್ ಅವರು ಶಿರೂರು ಮಠದ ಕೀರ್ತಿಶೇಷ ಲಕ್ಷ್ಮೀವರ ತೀರ್ಥ ಶ್ರೀಪಾದರ ಕಾರು ಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು.
ನಗರದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ಅವರು, ಕಲ್ಸಂಕ ಜಂಕ್ಷನ್ನಲ್ಲಿ ವಾಹನ ದಟ್ಟಣೆಯಿಂದ ಸಂಚಾರ ಅಸ್ತವ್ಯಸ್ತಗೊಂಡಾಗ ಪೊಲೀಸರೊಂದಿಗೆ ಕೈಜೋಡಿಸಿ ಸುಗಮ ಸಂಚಾರಕ್ಕೆ ಸಹಕರಿಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

