ಉಡುಪಿಯಲ್ಲಿ ಆರ್‌ಎಸ್‌ಎಸ್ ಗಣವೇಷಧಾರಿಗಳ ಪಥಸಂಚಲನ

0
7

ಉಡುಪಿ : ನಗರದ ಕಿನ್ನಿಮುಲ್ಕಿಯ ಗೋವಿಂದ ಕಲ್ಯಾಣ ಮಂಟಪದಿಂದ ಉಡುಪಿ ಸಿಟಿ ಬಸ್ ನಿಲ್ದಾಣದ ಕ್ಲಾಕ್ ಟವರ್‌ವರೆಗೆ ಆರ್‌ಎಸ್‌ಎಸ್ ಗಣವೇಷಧಾರಿಗಳ ಪಥಸಂಚಲನ ನಡೆಯಿತು.

200ಕ್ಕೂ ಅಧಿಕ ಆರ್‌ಎಸ್‌ಎಸ್ ಕಾರ್ಯಕರ್ತರು ಏಕರೂಪದ ಗಣವೇಷ ಧರಿಸಿ ಶಿಸ್ತಿನಿಂದ ಪಥಸಂಚಲನದಲ್ಲಿ ಪಾಲ್ಗೊಂಡರು. ಕಿನ್ನಿಮುಲ್ಕಿಯಿಂದ ಆರಂಭಗೊಂಡ ಪಥಸಂಚಲನವು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಕೂಡ ಆರ್‌ಎಸ್‌ಎಸ್ ಗಣವೇಷ ಧರಿಸಿ ಪಥಸಂಚಲನದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.