ಜೇನುಗೂಡು ಮಹೇಶ್ ಊಗಿನಹಳ್ಳಿಗೆ “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ

0
6

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಕರ್ನಾಟಕ 71ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವಂಬರ್ 15 ರಂದು ಭಾನುವಾರ ನಗರದ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ಬೆಂಗಳೂರು ನಿವಾಸಿ ಕವಿ ಹಾಗೂ ಸಾಹಿತ್ಯ ಸಂಘಟಕ ಹಾಗೂ ಪತ್ರಕರ್ತರಾದ ಜೇನುಗೂಡು ಮಹೇಶ್ ಊಗಿನಹಳ್ಳಿ ಅವರಿಗೆ ೆ “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ವಾಸುದೇವ ಲಕ್ಷö್ಮಣ್ ರಾಯ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಶಸ್ತಿಗೆ ಆಯ್ಕೆಯಾದ ಜೇನುಗೂಡು ಮಹೇಶ್ ಊಗಿನಹಳ್ಳಿ ಅವರು, ಕಳೆದ 30 ವರ್ಷಗಳು ನಿರಂತರವಾಗಿ ನಾಡು, ನುಡಿ, ಕನ್ನಡ ಹೋರಾಟ, ಸಾಹಿತ್ಯ, ಸಂಘಟನೆ ಹಾಗೂ ಪತ್ರಿಕೆ ಸೇವೆಯಲ್ಲಿ ತಮ್ಮದೇ ಆದ ಅಮೂಲ್ಯ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದ್ದಾರೆ. ಇಂತಹ ಮಹನೀಯರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸುವುದು ನಮ್ಮ ಸಂಸ್ಥೆಗೆ ಅತ್ಯಂತ ಸಂತೋವಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಲಾಕುಂಚದ ಸರ್ವ ಸದಸ್ಯರು, ಪದಾಧಿಕಾರಿಗಳು ಇವರಿಗೆ ಅಭಿಮಾನದಿಂದ ಅಭಿನಂದಿಸಿ ಶುಭ ಹಾರೈಸಿದ್ದಾರೆ.