
ಪೆಂಟಾಥ್ಲಾನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ
ಕಡಂದಲೆ: ಕಡಂದಲೆ ಸುಬ್ರಹ್ಮಣ್ಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಚೆನ್ನಪ್ಪ ಅವರು 20ನೇ ನ್ಯಾಷನಲ್ ಇಂಟರ್ ಡಿಸ್ಟ್ರಿಕ್ಟ್ ಜೂನಿಯರ್ ಅಥ್ಲೆಟಿಕ್ಸ್ ಮೀಟ್–2026 ಕ್ರೀಡಾಕೂಟದಲ್ಲಿ ಅಂಡರ್–16 ವಿಭಾಗದ ಪೆಂಟಾಥ್ಲಾನ್ (PENTATHLON) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಅಕ್ಟೋಬರ್ನಲ್ಲಿ ನಡೆದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚೆನ್ನಪ್ಪ ಅವರು ಮುಂದಿನ ತಿಂಗಳು ಹೈದರಾಬಾದ್ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆ ಗಳಿಸಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದ್ದು, ಶಾಲೆಯ ಪರವಾಗಿ ಚೆನ್ನಪ್ಪ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
