ಡಾ. ಶಿರೂರು ಅವರಿಗೆ ಕರ್ನಾಟಕ ಸಾಧಕ ರತ್ನ ರಾಜ್ಯ ಪ್ರಶಸ್ತಿ : ಬಾಗೇವಾಡಿ ಮಠ

0
16

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರಿಗೆ ಕರ್ನಾಟಕ ಸಾಧಕ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಜನಪರವಾಣಿ ಪ್ರಕಾಶನದ ಸಂಸ್ಥಾಪಕರಾದ ಶ್ರೀ ಬಿ.ಎಸ್. ಬಾಗೇವಾಡಿ ಮಠ ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಸರೋಜಿನಿ ಶಾನುಭೋಗ ಅವರ ಪುತ್ರ.

ಇವರು ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಡಾ. ಶಿರೂರು ಅವರು ಭಾಷಾ ಶಿಕ್ಷಕರಾಗಿ, ಸಾಹಿತ್ಯ ಸಂಘಟಕರಾಗಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು, ಜಿಲ್ಲೆ ಮತ್ತು ರಾಜ್ಯದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ತಾಲೂಕು ಶಿಕ್ಷಕ ದಿನಾಚರಣಾ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಸ್ಮರಣೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಅವರ ಸೇವೆ ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು ಅವರು ಡಾ.ಶಿರೂರು ಅವರಿಗೆ ಅಭಿನಂದನೆಸಲ್ಲಿಸಿದ್ದಾರೆ.