ಮಂಗಳೂರು : ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರಾಯೋಜಿಸುತ್ತಿರುವ ವಾರ್ಷಿಕ ಪ್ರತಿಷ್ಠಿತ ರಾಜ್ಯ ಮಟ್ಟದ “ವಂದನಾ ಪ್ರಶಸ್ತಿ – 2026-27”ಯನ್ನು ಶುಕ್ರವಾರ 30.10.2026 ರಂದು ಸಂಜೆ 07.30 ಗಂಟೆಗೆ ನಗರದ ಹೊಟೇಲ್ ಸೀ ವ್ಯೂವ್ನ ಸಭಾಂಗಣದಲ್ಲಿ ಜರಗುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಸಭಾಪತಿಯವರಾದ ರೋ| ಡಾ| ದೇವದಾಸ್ ರೈಯವರು ಪತ್ರಿಕಾ ಮಾಹಿತಿ ನೀಡಿದ್ದಾರೆ.
ಪ್ರಸ್ತುತ 2026-27ನೇ ಸಾಲಿನ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಎಂ. ಆರ್. ಪೂವಮ್ಮ ಕ್ರೀಡಾಕ್ಷೇತ್ರದಲ್ಲಿ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಹಾಗೂ ಅಮೂಲ್ಯ ಕೊಡುಗೆ ಮತ್ತು ಸಾಧಿಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಈ ಪ್ರಶಸ್ತಿಯು ಪ್ರಶಸ್ತಿ ಫಲಕ, ಪ್ರಶಸ್ತಿ ಪ್ರಮಾಣ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
ಮಾಜಿ ಒಲಿಂಪಿಕ್ ಕ್ರೀಡಾಪಟು ಹಾಗೂ ಅರ್ಜುನ ಅವಾರ್ಡ್ ಪುರಸ್ಕçತ, ಪದ್ಮಶ್ರೀ ವಂದನಾ ಶಾನುಭಾಗ್ (ಪೈ ಮಾರೂರು) ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಪ್ರಶಸ್ತಿ ವಿಜೇತರನ್ನು ಅಭಿನಂದಿಸಿ ಪ್ರಶಸ್ತಿ ಪ್ರದಾನ ಮಾಡಲಿರುವರು. ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷರಾದ ರೋ| ಬಿ.ಎನ್. ರವೀಂದ್ರ ಅಧ್ಯಕ್ಷತೆ ವಹಿಸಲಿರುವರು. ರೋಟರಿ ಜಿಲ್ಲಾ 3181ರ ಸಹಾಯಕ ಗರ್ವನರ್ ರೋ| ಪ್ರವೀಣ್ಚಂದ್ರ ಶರ್ಮಾ ಹಾಗೂ ವಲಯ ಸೇನಾನಿ ರೋ| ರಾಜೇಶ್ ಶೆಟ್ಟಿ, ಗೌರವ ಅತಿಥಿಯಾಗಿ ಸಮಾರಂಭದಲ್ಲಿ ಪಾಲ್ಗೊಳಲಿರುವರು.
ರೋಟರಿ ಮತ್ತು ರೋರ್ಯಾಕ್ಟ್ ಸಂಸ್ಥೆಯ ಪ್ರತಿಷ್ಠಿತ ವಂದನಾ ಪ್ರಶಸ್ತಿಯನ್ನು ಪ್ರತಿ ವರ್ಷ ಕ್ರೀಡೆ, ವಾಣಿಜೋದ್ಯಮ, ಶಿಕ್ಷಣ, ಕಲೆ, ಸಂಗೀತ, ಸಾಹಿತ್ಯ, ವಿಜ್ಞಾನ, ವೃತ್ತಿ ಸೇವೆ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿದ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಸಾಧಕರನ್ನು ಆಯ್ಕೆ ಮಾಡಲಾಗುವುದು. ಇದು ರೋಟರಿ ಸಂಸ್ಥೆಯ ವೃತ್ತಿಪರ ಸೇವೆ ಯೋಜನೆಯ ಅಂಗವಾಗಿ ಪ್ರದಾನ ಮಾಡಲಾಗುವುದೆಂದು ಪ್ರಶಸ್ತಿ ಆಯ್ಕೆ ಸಮಿತಿಯ ಸಭಾಪತಿಯಾದ ರೋ| ಡಾ| ದೇವದಾಸ್ ರೈ ಪತ್ರಿಕಾ ಮಾಹಿತಿ ನೀಡಿದ್ದಾರೆ. ರೋಟರಿ ಸಂಸ್ಥೆಯ ಅಧ್ಯಕ್ಷ ರೋ| ಬಿ.ಎನ್. ರವೀಂದ್ರ, ರೋಟರಿ ಸಂಸ್ಥೆಯ ಕಾರ್ಯದರ್ಶಿ, ರೋ| / ರೋರ್ಯಾಕ್ಟರ್ ಜಾಕ್ಸನ್ ಸಲ್ದಾನ್ಹ, ರೋರ್ಯಾಕ್ಟ್ ಮಂಗಳೂರು ಸಿಟಿಯ ಅಧ್ಯಕ್ಷರಾದ ರೋ| ರಕ್ಷಣಾ, ರೋರ್ಯಾಕ್ಟ್ ಮಂಗಳೂರು ಸಿಟಿಯ ಕಾರ್ಯದರ್ಶಿ ರೋ| ಮುಖೇಶ್ ಕರ್ಕೇರ ಮತ್ತು ಮಾಧ್ಯಮ ಸಲಹೆಗಾರರಾದ ರೋ| ಎಂ.ವಿ. ಮಲ್ಯ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

