
ಹೆಬ್ರಿ : ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ತಂಡದ ತರಬೇತುದಾರ ಸಂಸ್ಥೆಯ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಇವರನ್ನು ಸಂಸ್ಥೆಯ ಆಡಳಿತ ಮಂಡಳಿ ಗೌರವಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ವಿಶ್ವಸ್ಥರಾದ ಶೈಲೇಶ್ ಕಿಣಿ, ರಾಜೇಶ್ ನಾಯಕ್, ಲಕ್ಷ್ಮಣ್ ಭಟ್, ಭಾಸ್ಕರ್ ಜೋಯಿಸ್, ಹಾಸ್ಟೆಲ್ ಕಮಿಟಿ ಸದಸ್ಯ ರಾಮಕೃಷ್ಣ ಆಚಾರ್ಯ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಸೀತಾನದಿ ವಿಠಲ್ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ, ಸಂಸ್ಥೆಯ ಮುಖ್ಯಸ್ಥರಾದ ಪ್ರಕಾಶ್ ಜೋಗಿ, ಅಪರ್ಣಾ ಆಚಾರ್, ಅರುಣ್ ಕುಮಾರ್ ಹೆಚ್ ವೈ, ಶಕುಂತಲಾ, ಪಿ ಆರ್ ಓ ವಿಜಯಕುಮಾರ್ ಶೆಟ್ಟಿ , ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಮತ್ತು ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.
