ವಿಷ ಪದಾರ್ಥ ಸೇವಿಸಿ ನವವಿವಾಹಿತೆ ಸಾವು : ಇಬ್ಬರ ವಿರುದ್ಧ ಪ್ರಕರಣ

0
94

ಪುತ್ತೂರು : ವೀರಮಂಗಲದಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 25ರಂದು ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೃತೆಯ ಪತಿಯ ಸಹೋದರ ಹಾಗೂ ಅವರ ಪತ್ನಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವೀರಮಂಗಲದ ಸುಂದರ ಅವರ ಪತ್ನಿ ಮಮತಾ (32) ಮೃತಪಟ್ಟವರು. ಅಕ್ಟೋಬರ್ 24ರಂದು ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅವರು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 25ರಂದು ಅವರು ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಆರಂಭದಲ್ಲಿ ಪೊಲೀಸರು ಮೃತೆಯ ಹೇಳಿಕೆಯನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ಬಳಿಕ ಮೃತೆಯ ಪತಿಯ ಸಹೋದರ ಉಮೇಶ್ ಹಾಗೂ ಅವರ ಪತ್ನಿ ವಸಂತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.