ಕಾರ್ಕಳ : ಇನ್ನಾ ಕುರ್ಕಿಲ್ ಬೆಟ್ಟು ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಲಯನ್ಸ್ ಜಿಲ್ಲಾ ಗವರ್ನರ್ ರ ಧ್ಯೇಯವಾಕ್ಯ “ಜೀವನೋತ್ಸಹ” ಎಂಬ ವಿಷಯದ ಕುರಿತು ಪ್ರಬಂಧ ಮತ್ತು ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆಗಳನ್ನು ನಡೆಸಲಾಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಲಯನ್ಸ್ ಕ್ಲಬ್ ಬೆಳ್ಮಣಿನ ವತಿಯಿಂದ ಪ್ರೋತ್ಸಾಹಕ ಬಹುಮಾನ ನೀಡಿ ಹುರಿದುಂಬಿಸಲಾಯಿತು. ಈ ಸಂಧರ್ಭದಲ್ಲಿ ಲಯನ್ಸ್ ಕ್ಲಬ್ ಬೆಳ್ಮಣಿನ ಅಧ್ಯಕ್ಷರಾದ ಲಯನ್ ಶಿವರಾಮ ಆಚಾರ್ಯ, ಕಾರ್ಯದರ್ಶಿ ಲಯನ್ ಟೀನಾ ಡೆಸಾ ಮತ್ತು ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

