ಆರೋಗ್ಯ ಸಚಿವರು ನವೆಂಬರ್ 15 ರೊಳಗಾಗಿ ನೂತನ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಲ್ಲಿಯೇ ಜಿಲ್ಲೆಯ ಜನತೆಗೆ ಜಿಲ್ಲಾಸ್ಪತ್ರೆಯ ಲೋಕಾರ್ಪಣೆಯ ಕುರಿತು ಸ್ಪಷ್ಟ ಭರವಸೆ ನೀಡಬೇಕು. ಜಿಲ್ಲಾಸ್ಪತ್ರೆ ಲೋಕಾರ್ಪಣೆಗೆ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳು, ಮೂಲಸೌಕರ್ಯಗಳು ಮತ್ತು ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ಕಾಲಮಿತಿಯುಳ್ಳ ಕಾರ್ಯಯೋಜನೆಯನ್ನು ಪ್ರಕಟಿಸಬೇಕು ಎಂದು ಶಾಸಕ ಯಶಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ನಗರದ ಖಾಸಗೀ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು , ದಕ್ಷಿಣ ಕನ್ನಡ ಜಿಲ್ಲೆಯಿಂದ ಭೌಗೋಳಿಕವಾಗಿ ಪ್ರತ್ಯೇಕಗೊಂಡು ಉಡುಪಿ ಜಿಲ್ಲೆ ಅಸ್ತಿತ್ವಕ್ಕೆ ಬಂದು 28 ವರ್ಷಗಳು ಕಳೆದಿವೆ. ಉಡುಪಿಗೆ ಸುಸಜ್ಜಿತವಾದ ಸ್ವಂತ ಜಿಲ್ಲಾ ಆಸ್ಪತ್ರೆ ದೊರೆಯಬೇಕೆಂಬುದು ಜಿಲ್ಲೆಯ ಜನತೆಯ ದಶಕಗಳ ಕನಸಾಗಿದೆ.
2021 ರಲ್ಲಿ ಆರಂಭಗೊಂಡ ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ 2023ರಲ್ಲಿ ಬಹುತೇಕ ಪೂರ್ಣಗೊಂಡಿದ್ದರೂ ಈವರೆಗೂ ಜಿಲ್ಲೆಯ ಜನರ ಸೇವೆಗೆ ಲಭ್ಯವಾಗಿಲ್ಲ.
ಈ ಬಗ್ಗೆ ಕಳೆದ ಮೂರೂವರೆ ವರ್ಷಗಳಿಂದ ವೈಯಕ್ತಿಕವಾಗಿ, ಪತ್ರಗಳ ಮೂಲಕ ಹಾಗೂ ಯಾವುದೇ ವಿಧಾನಮಂಡಲದ ಪ್ರಯೋಜನವಾಗಿಲ್ಲ. ಅಧಿವೇಶನಗಳಲ್ಲಿ ಸೆಳೆದರೂ ಗಮನ
ಈ ಹಿಂದಿನ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯರವರಿಗೆ. ಈಗಿನ ಮುಖ್ಯ ಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರಿಗೆ ಹಾಗೂ ಹಿಂದಿನ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಮತ್ತು ಪ್ರಸ್ತುತ ಆರೋಗ್ಯ ಸಚಿವರಾದ ಯು. ಟಿ. ಖಾದರ್ ರವರಿಗೆ ಮತ್ತು ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ರವರಿಗೆ ಮತ್ತು ಈಗಿನ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಆರ್ಶದ್ ರವರಿಗೆ, ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳಿಗೂ ಈ ಕುರಿತು ಹಲವು ಬಾರಿ ಪತ್ರ ಬರೆದು ಮನವಿ ಮಾಡಿದರೂ ಈ ಬಗ್ಗೆ ಕ್ರಮ ವಹಿಸಿರುವುದಿಲ್ಲ.
. ಕ್ಷೇತ್ರದ ಜನರಿಗೆ ಉತ್ತರದಾಯಿತ್ವ ಮತ್ತು ಜವಾಬ್ದಾರಿ ಹೊಂದಿದ ಸ್ಥಳೀಯ ಶಾಸಕರ ಮಾತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಗಮನಕ್ಕೂ ತಾರದೇ, ಹಳೆಯ ಆಸ್ಪತ್ರೆಯ ದುರಸ್ಥಿ ಹಂತದಲ್ಲಿದ್ದ ತುಕ್ಕು ಹಿಡಿದ ಪರಿಕರಗಳನ್ನು ಕಳೆದ ವಾರದಲ್ಲಿ ಸ್ಥಳಾಂತರಿಸಲು ಹೊರಟಿದ್ದ ಇಲಾಖೆಯ ಏಕ ಪಕ್ಷೀಯ ನಿರ್ಧಾರವು ಖಂಡನಾರ್ಹವಾಗಿದೆ.
250 ಹಾಸಿಗೆಗಳ, 6 ಮಹಡಿಗಳ ಜಿಲ್ಲಾಸ್ಪತ್ರೆಯ ನೂತನ ಕಟ್ಟಡವನ್ನು ಸ್ವಚ್ಛಗೊಳಿಸದೇ. ಹಿಂದಿನ ಕಟ್ಟಡದಿಂದ 30 ವರ್ಷಗಳಷ್ಟು ಹಳೆಯದಾದ, ಜೀರ್ಣಾವಸ್ಥೆಯಲ್ಲಿರುವ ಹಾಗೂ ತುಕ್ಕು ಹಿಡಿದಿರುವ ಮಂಚಗಳು, ಕಪಾಟುಗಳು ಮತ್ತು ಇತರ ಉಪಕರಣಗಳನ್ನು ನೂತನ ಆಸ್ಪತ್ರೆಯ ಕಟ್ಟಡಕ್ಕೆ ಸ್ಥಳಾಂತರಿಸಲು ಹೊರಟಿದ್ದ ಕ್ರಮವು ಜಿಲ್ಲೆಯ ಜನರಲ್ಲಿ ತೀವ್ರ ನಿರಾಸೆ ಮತ್ತು ಆತಂಕ ಮೂಡಿಸಿದೆ.
ಸಾರ್ವಜನಿಕರ ಆಕ್ಷೇಪದ ಹಿನ್ನೆಲೆಯಲ್ಲಿ ಹಳೆಯ ಪೀಠೋಪಕರಣಗಳು ಮತ್ತು ಉಪಕರಣಗಳ ಸ್ಥಳಾಂತರ ಪ್ರಕ್ರಿಯೆಯನ್ನು ಮೊನ್ನೆ ನಮ್ಮ ಎಚ್ಚರಿಕೆ ಮೇರೆಗೆ ಸದ್ಯಕ್ಕೆ ಸ್ಥಗಿತಗೊಳಿಸಿದ್ದಾರೆ. ಆದರೆ, ಈ ಕ್ರಮಕ್ಕೆ ಶಾಶ್ವತ ಪರಿಹಾರ ಕಂಡುಕೊಂಡು ಹೊಸ ಆಸ್ಪತ್ರೆಯನ್ನು ಗುಣಮಟ್ಟದ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಬೇಕು.ಜಿಲ್ಲಾ ಆಸ್ಪತ್ರೆಯ ವಿಚಾರದಲ್ಲಿ ಸರ್ಕಾರದ ವಿಳಂಬ ಧೋರಣೆಯಿಂದ ಜನರ ಸಹನೆಯ ಕಟ್ಟೆಯೊಡೆಯುತ್ತಿದೆ. ಆಸ್ಪತ್ರೆಯ ಸಂಪೂರ್ಣ ಕಾರ್ಯಾರಂಭಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು.
ಈಗಾಗಲೇ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನಕ್ಕೆ ಈ ವಿಷಯವನ್ನು ತರಲಾಗಿದೆ. ಸುಸಜ್ಜಿತ ಜಿಲ್ಲಾಸ್ಪತ್ರೆಯ ಲೋಕಾರ್ಪಣೆ ವಿಳಂಭವಾಗುತ್ತಿದ್ದು, ಜಿಲ್ಲೆಯ ಜನತೆಯ ಹಿತದೃಷ್ಟಿಯಿಂದ ಆರೋಗ್ಯ ಸಚಿವರು ಈ ಕುರಿತು ಗಮನಹರಿಸಬೇಕು.
ಅಲ್ಲದೇ, ಮಾನ್ಯ ಆರೋಗ್ಯ ಸಚಿವರು ಈ ಬಗ್ಗೆ 2026ರ ನವೆಂಬರ್ 15 ರೊಳಗಾಗಿ ನೂತನ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಲ್ಲಿಯೇ ಜಿಲ್ಲೆಯ ಜನತೆಗೆ ಜಿಲ್ಲಾಸ್ಪತ್ರೆಯ ಲೋಕಾರ್ಪಣೆಯ ಕುರಿತು ಸ್ಪಷ್ಟ ಭರವಸೆ ನೀಡಬೇಕು. ಜಿಲ್ಲಾಸ್ಪತ್ರೆ ಲೋಕಾರ್ಪಣೆಗೆ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳು, ಮೂಲಸೌಕರ್ಯಗಳು ಮತ್ತು ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ಕಾಲಮಿತಿಯುಳ್ಳ ಕಾರ್ಯಯೋಜನೆಯನ್ನು ಪ್ರಕಟಿಸಬೇಕು.
ಉಡುಪಿ ಜಿಲ್ಲೆಯ ಜನರ ಆರೋಗ್ಯ ಮತ್ತು ಜೀವ ರಕ್ಷಣೆಯ ಹಿತದೃಷ್ಟಿಯಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ವಿಳಂಬವಿಲ್ಲದೆ ನೂತನ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಬೇಕು ಎಂದು ಆಗ್ರಹಿಸಿದರು.

