ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ : ನ.1ರಂದು ಪೂರ್ವಭಾವಿ ಸಭೆ

0
12

ಸಾಂತೂರು : ಇಲ್ಲಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿಸೆಂಬರ್ 15ರಂದು ಷಷ್ಟೀ ಮಹೋತ್ಸವ ಹಾಗೂ 2027ರ ಜನವರಿ 14ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಪೂರ್ವಸಿದ್ಧತೆಗಾಗಿ ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಸಾಂತೂರು ಹಾಗೂ ಪಿಲಾರು ಗ್ರಾಮದ ಗ್ರಾಮಸ್ಥರು, ಊರಿನ ಹಾಗೂ ಪರವೂರಿನ ಭಕ್ತಾಭಿಮಾನಿಗಳು ಸಭೆಯಲ್ಲಿ ಸಮಯಕ್ಕೆ ಸರಿಯಾಗಿ ಉಪಸ್ಥಿತರಿದ್ದು, ತಮ್ಮ ಅಮೂಲ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡುವಂತೆ ದೇವಸ್ಥಾನದ ಅರ್ಚಕ ವೃಂದ, ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ವಿನಂತಿಸಿದೆ.

ಬ್ರಹ್ಮಕಲಶೋತ್ಸವದಂತಹ ಧಾರ್ಮಿಕ ಕಾರ್ಯಕ್ರಮವು ಊರಿನ ಎಲ್ಲ ಭಕ್ತರ ಸಹಕಾರ ಹಾಗೂ ಸಹಭಾಗಿತ್ವದೊಂದಿಗೆ ಯಶಸ್ವಿಯಾಗಿ ನಡೆಯಬೇಕಿದೆ. ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ಸವದ ಯಶಸ್ಸಿಗೆ ಕೈಜೋಡಿಸಬೇಕೆಂದು ಸಮಿತಿ ಮನವಿ ಮಾಡಿದೆ.

ಬ್ರಹ್ಮಕಲಶೋತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವುದರಿಂದ ನವೆಂಬರ್ 1ರಂದು ನಡೆಯುವ ಪೂರ್ವಭಾವಿ ಸಭೆಯಲ್ಲಿ ಎಲ್ಲರೂ ತಪ್ಪದೆ ಭಾಗವಹಿಸಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.