ನ.1ರಂದು ಕಾರ್ಕಳ ಕುಲಾಲ ಸುಧಾರಕ ಸಂಘದ 31ನೇ ವಾರ್ಷಿಕ ಮಹಾಸಭೆ

0
12

ಕಾರ್ಕಳ: ಕಾರ್ಕಳ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಇದರ ವತಿಯಿಂದ ನವೆಂಬರ್ 1, 2026ರ ಭಾನುವಾರದಂದು ಸಂಘದ ಆವರಣದಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಂಗವಾಗಿ ಸತ್ಯನಾರಾಯಣ ಪೂಜೆ, 31ನೇ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಹಾಗೂ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಇದರೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಜರುಗಲಿವೆ.

ಸಮುದಾಯದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು, ಸಾಧಕರನ್ನು ಗೌರವಿಸುವುದು ಹಾಗೂ ಸಂಘದ ಸದಸ್ಯರ ನಡುವೆ ಒಗ್ಗಟ್ಟು ಮತ್ತು ಸೌಹಾರ್ದವನ್ನು ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಕುಲಾಲ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.