ಸುಭೇದಾರ್ ಅಪ್ಪಯ್ಯ ಗೌಡರವರ ಪುಣ್ಯಸ್ಮರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ

0
5

ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ವೀರ ಸೇನಾನಿ ಸುಬೇದಾರ್ ಅಪ್ಪಯ್ಯ ಗೌಡ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಪಾಲ್ಗೊಂಡು, ಅವರ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಸುಬೇದಾರ್ ಅಪ್ಪಯ್ಯ ಗೌಡ ಅವರು ದೇಶಕ್ಕೆ ಮತ್ತು ರಾಜ್ಯಕ್ಕೆ ನೀಡಿದ ಅಪ್ರತಿಮ ಕೊಡುಗೆ ಹಾಗೂ ಬಲಿದಾನವನ್ನು ಶಾಸಕರು ಈ ಸಂದರ್ಭದಲ್ಲಿ ಸ್ಮರಿಸಿದರು.

ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ