ಮಂಗಳೂರು : ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೂವರನ್ನು ಮತ್ತು ಪ್ರಶಸ್ತಿ ನೀಡುತ್ತಿರುವ ಸರಕಾರವನ್ಮು ತುಳು ಪರಿಷತ್ ಅಭಿನಂದಿಸಿದೆ.
ತುಳು ಭಾಷೆಗೆ ಅಧಿಕೃತ ಸ್ಥಾನವಾನ ನೀಡಿರುವುದಲ್ಲದೆ ಸಾಧಕರಿಗೆ ಪ್ರ ಶಸ್ತಿ ನೀಡಿ ಗೌರವಿಸಿರುವುದು ಸಂತಸ ನೀಡಿದೆ ಎಂದು ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿ ಪಡೆಯುತ್ತಿರುವ ಕರ್ನಾಟಕ ತುಳು ಅಕಾಡಮಿ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ, ಸಂಶೋಧಕಿ ಇಂದಿರಾ ಹೆಗ್ಗಡೆ ಮತ್ತು ಛಾಯಗ್ರಾಹಕ ವಿಶ್ವನಾಥ ಸುವರ್ಣ ಅವರನ್ನು ಪರಿಷತ್ ವತಿಯಿಂದ ವಿಶೇಷವಾಗಿ ಗೌರವಿಸಲಾಗುವುದು ಎಂದವರು ತಿಳಿಸಿದ್ದಾರೆ
