ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಅಕ್ಟೋಬರ್ 31 ರಂದು ಶುಕ್ರವಾರ ಸಂಜೆ 6ಗಂಟೆಗೆ ಪ್ರಸಾರವಾಗುವ *ವಿಶೇಷ ಸಂದರ್ಶನ ದಲ್ಲಿ ಅನಿಮೇಶನ್ ಶಿಕ್ಷಣ ಕ್ಷೇತ್ರದಲ್ಲಿ ಹೊಸಕ್ರಾಂತಿ ಮಾಡಿದ ಶಿಕ್ಷಣ ತಜ್ಞ ಹಾಗೂ ಚಿತ್ರೋದ್ಯಮಿ ಬಿ.ಎಸ್ ಶ್ರೀನಿವಾಸ್ ತಮ್ಮವಿಶೇಷ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಇದು ನವೆಂಬರ್ 1ರಂದು ಆದಿತ್ಯವಾರ ಮಧ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

