ಉಡುಪಿ : ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ – ಶಿಕ್ಷಕ ಸಂಘದ ವಾರ್ಷಿಕ ಕಾರ್ಯಕ್ರಮ ಅ.31 ರಂದು ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಬಾಲಕೃಷ್ಣ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹಿತವಚನವನ್ನು ಕೊಟ್ಟರು. ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ನ ಆಡಳಿತಾಧಿಕಾರಿ ಡಾ. ಶ್ರೀಧರ್ ರಂಗನಾಥ್ ಪೈ ಅವರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ನಾರಾಯಣ ಅಮೀನ್, ಕಾರ್ಯದರ್ಶಿ ಅಶ್ವಿನಿ ಪೈ ಖಾಜಾಂಚಿ ಮೈಕಲ್ ಡೊಮಿನಿಕ್ ಡಿಸೋಜಾ, ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ ಪೈ, ಉಪ ಪ್ರಾಂಶುಪಾಲರಾದ ಡಾ. ವಿಶ್ವನಾಥ್ ಪೈ ಹಾಗೂ ಎಂಜಿಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾಲತಿ ದೇವಿ ಉಪಸ್ಥಿತರಿದ್ದು, ಪ್ರಾಸ್ತಾವಿಕ ಮಾತುಗಳನ್ನಾಡಿದರು .
ತದನಂತರ 2026-27ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಜಿ ರವರು ಅವಿರೋಧವಾಗಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಕೇಶವ್ ಅಮೀನ್, ಖಜಾಂಚಿ ವಿಲ್ಫ್ರೆಡ್ ಡಿಸೋಜಾ, ಸದಸ್ಯರಾಗಿ. ಅಜಿತ್, ಆಶಾ, ಪ್ರದೀಪ್ ಚಂದ್ರಕುತ್ಪಾಡಿ, ಅರವಿಂದ ನಾಯಕ್, ಚಂಚಲಾಕ್ಷಿ ಇವರು ಆಯ್ಕೆಯಾದರು.
ವಿದ್ಯಾರ್ಥಿನಿ ಕು.ಅದಿತಿ ಪ್ರಾರ್ಥನೆ ನೆರವೇರಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಭಾರತಿ ಸ್ವಾಗತ ಮಾಡಿದರು. ಕನ್ನಡ ವಿಭಾಗದ ಉಪನ್ಯಾಸಕರಾದ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.

