ಅಮೃತ ಭಾರತಿ ಸಮೂಹ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

0
16

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಸಂಸ್ಥೆ, ಮಿಥಿಲಾ ನಗರ, ಹೆಬ್ರಿ ಇಲ್ಲಿ 71ನೇ ಕನ್ನಡ ರಾಜ್ಯೋತ್ಸವ ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರು, ಕನ್ನಡ ನಾಡು-ನುಡಿಯ ಮಹತ್ವವನ್ನು ತಿಳಿಸಿ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿದ್ಯಾರ್ಥಿಗಳು ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಪ್ರಕಾಶ್ ಜೋಗಿ, ಮೇಲ್ವಿಚಾರಕರಾದ ವಿಜಯ್ ಕುಮಾರ್ ಶೆಟ್ಟಿ, ಎಲ್ಲಾ ಉಪನ್ಯಾಸಕರು, ಶಿಕ್ಷಕರು ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.