ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿಯಿಂದ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಲಕಾವೇರಿ ತೀರ್ಥ, ಪ್ರಸಾದ ವಿತರಣೆ

0
10

ಭಾಗಮಂಡಲ : ಶ್ರೀ ಭಗಂಡಶ್ವೇರ ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾದ ಬಾನಂಡ ಪ್ರಥ್ಯು ಮತ್ತು ಸದಸ್ಯರ‌ ತಂಡದವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ, ನಾಡಿನ‌ ಜೀವನದಿ ತಾಯಿ ಕಾವೇರಿ ಮಾತೆಯ ಪವಿತ್ರ ತೀರ್ಥೋದ್ಭವದ ಪ್ರಸಾದ ವಿತರಿಸಿದರು.

ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಮಾರ್ಗದರ್ಶನದಂತೆ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ತಂಡದ ಭೇಟಿ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಟಾಟು ಮೊಣ್ಣಪ್ಪ ಇತರರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ