ನ.5 : ಶಕುಂತಲಾ ಶೆಟ್ಟಿ ಅವರ ‘ತುಳುವೆರೆ ತಿಂಗೊಲ್ದ ಪೊಲಬು’ ಕೃತಿ ಬಿಡುಗಡೆ

0
8

ಮಂಗಳೂರು: ಮಾಜಿ ಶಾಸಕಿ ಹಾಗೂ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಟಿ. ಶೆಟ್ಟಿ ಅವರ ಎರಡು ಕೃತಿಗಳ ಬಿಡುಗಡೆ ಸಮಾರಂಭವು ನವೆಂಬರ್ 5ರಂದು ಸಂಜೆ 4 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ.

ತುಳುನಾಡಿನಲ್ಲಿ ಪ್ರತಿ ತಿಂಗಳಿಗೂ ಇರುವ ವಿಶೇಷತೆಗಳು, ಆಚರಣೆಗಳು ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಪರಿಚಯಿಸುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ‘ತುಳುವೆರೆ ತಿಂಗೊಲ್ದ ಪೊಲಬು’ ಹಾಗೂ ಆಕೃತಿ ಆಶಯ ಪಬ್ಲಿಕೇಶನ್ಸ್ ಪ್ರಕಟಿಸಿರುವ ಶಕುಂತಲಾ ಶೆಟ್ಟಿ ಅವರ ಆತ್ಮಕಥನ ‘ಚಿತ್ತ ಭಿತ್ತಿಯ ಪತ್ತಾಯ’ ಕೃತಿಗಳು ಈ ಸಂದರ್ಭದಲ್ಲಿ ಲೋಕಾರ್ಪಣೆಗೊಳ್ಳಲಿವೆ.

ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಹಾಗೂ ಆಕೃತಿ ಆಶಯ ಪಬ್ಲಿಕೇಶನ್ಸ್ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸಲಿದ್ದಾರೆ.

‘ತುಳುವೆರೆ ತಿಂಗೊಲ್ದ ಪೊಲಬು’ ಕೃತಿಯನ್ನು ಅಕಾಡೆಮಿ ಸದಸ್ಯ ಕುಂಬ್ರ ದುರ್ಗಾ ಪ್ರಸಾದ್ ರೈ ಬಿಡುಗಡೆಗೊಳಿಸಿ ಕೃತಿ ಅವಲೋಕನ ಮಾಡಲಿದ್ದಾರೆ. ‘ಚಿತ್ತ ಭಿತ್ತಿಯ ಪತ್ತಾಯ’ ಆತ್ಮಕಥನವನ್ನು ಲೇಖಕ ಡಾ. ನರೇಂದ್ರ ರೈ ದೇರ್ಲ ಬಿಡುಗಡೆಗೊಳಿಸಿ ಕೃತಿ ಪರಿಚಯ ಮಾಡಲಿದ್ದಾರೆ.

ಹಿರಿಯ ಲೇಖಕಿ ಹಾಗೂ ಸಂಶೋಧಕಿ ಬಿ.ಎಂ. ರೋಹಿಣಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆಕೃತಿ ಆಶಯ ಪಬ್ಲಿಕೇಶನ್ಸ್‌ನ ಮುಖ್ಯಸ್ಥ ಕಲ್ಲೂರು ನಾಗೇಶ್ ಹಾಗೂ ಕರಾವಳಿ ಲೇಖಕಿಯರ ಸಂಘದ ಕಾರ್ಯದರ್ಶಿ ಕೃಷ್ಣವೇಣಿ ಉಪಸ್ಥಿತರಿರಲಿದ್ದಾರೆ ಎಂದು ತುಳು ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.