ಅಮೃತಭಾರತಿ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0
10

ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ, ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಅಮೃತ ಭಾರತಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಮಾತನಾಡಿ, ಕನ್ನಡದ ಭಾಷೆಗೆ ಭಾವನಾತ್ಮಕವಾದ  ಸಂಬಂಧ ಇದೆ. ಆದ್ದರಿಂದ ಕನ್ನಡ ಶ್ರೇಷ್ಠ ಭಾಷೆಯಾಗಿದೆ. ಭಾಷಾ ವೈವಿಧ್ಯವನ್ನು ಹೊಂದಿ ಹೃದಯವಂತಿಕೆಯ ಪ್ರತೀಕವನ್ನು ಹೊಂದಿದೆ ಎಂದು ತಿಳಿಸಿದರು.

ಸಂಸ್ಥೆಯ ಕನ್ನಡ ಶಿಕ್ಷಕ ಮಹೇಶ್ ಹೈಕಾಡಿ ಮಾತನಾಡಿ, ಕನ್ನಡಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ತ್ಯಾಗ ಬಲಿ ದಾನದಿಂದ ದೊರೆತ ಕಟ್ಟಿದ ನಾಡು, ನಮಗೆ ಕನ್ನಡ ಭಾಷೆ ಅಧಿಪತಿಯಾದ ಭಾಷೆ, ಬೇರೆ ಭಾಷೆಗಳು ನಮಗೆ ಅತಿಥಿ ಭಾಷೆಯಾಗಬೇಕು. ಕನ್ನಡ ಜೀವನದ ಭಾಗವಾಗಬೇಕು ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಅಪರ್ಣಾ ಆಚಾರ್, ಶಕುಂತಲಾ ಹಾಗೂ ಗುರುವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು . ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಶ್ರಿತಾ ನಾಯ್ಕ ನಿರೂಪಿಸಿ, ಇಂಪನಾ ಸ್ವಾಗತಿಸಿದರು, ಶ್ಲೋಕ ವಂದಿಸಿದರು.