ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.4ರಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ 36ನೇ ಸಂಸ್ಥಾಪನಾ ವರ್ಷಾಚರಣೆ

0
11

ಕಾಸರಗೋಡು ಕನ್ನಡ ಗ್ರಾಮದಲ್ಲಿ ನವಂಬರ್ 4 ರಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ 36ನೇ ಸಂಸ್ಥಾಪನಾ ವರ್ಷಾಚರಣೆ- 61ನೇ ಕನ್ನಡ ಯಾತ್ರೆ
ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 4 ಬುಧವಾರದಂದು ಸಂಜೆ ಗಂಟೆ 6.00 ಕ್ಕೆ ಏರ್ಪಡಿಸಲಾಗಿದೆ.
ಖ್ಯಾತ ಗಾಯಕರಿಂದ ಭಾವಗೀತೆ ,ಜಾನಪದ ಗೀತೆ ,ಚಲನಚಿತ್ರ ಗೀತಾ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ 61ನೇ ವರ್ಷದ ಜನ್ಮದಿನಾಚರಣೆ – 61 ನೇ ಕನ್ನಡ ಯಾತ್ರೆಯನ್ನು ಆಚರಿಸಲಾಗುವುದು.
ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 28 ಮತ್ತು 29 ರಂದು ನಡೆಯುವ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ -2026 , ಕೇರಳ- ಕರ್ನಾಟಕ ಉತ್ಸವ ,ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವದ ಯಶಸ್ವಿ ಸಂಘಟನೆಗಾಗಿ ಕಾಸರಗೋಡು ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿಮಾನಿಗಳು ಸಮಾಲೋಚನಾ ಸಭೆ ನಡೆಸಲಿದ್ದಾರೆ.