ರಾಜ್ಯ ಹೆದ್ದಾರಿಯ ದುಸ್ಥಿತಿ ಖಂಡಿಸಿ ನ.6ರಂದು ಬೃಹತ್ ಪ್ರತಿಭಟನಾ ಸಮಾವೇಶ

0
1

ಉಪ್ಪಿನಂಗಡಿ–ಗುರುವಾಯನಕೆರೆ ರಾಜ್ಯ ಹೆದ್ದಾರಿಯ ದುಸ್ಥಿತಿಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ನಾಗರಿಕ ಹೋರಾಟ ಸಮಿತಿ ಕುಪ್ಪೆಟ್ಟಿ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿದೆ.

ನವೆಂಬರ್ 6ರಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಕಲ್ಲೇರಿ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಹಲವು ದಿನಗಳಿಂದ ರಸ್ತೆಯ ದುಸ್ಥಿತಿಯಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದು, ಜನಪ್ರತಿನಿಧಿಗಳು ಹಾಗೂ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜಾತಿ, ಧರ್ಮ ಹಾಗೂ ಪಕ್ಷಭೇದ ಮರೆತು ಸರ್ವ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ನಾಗರಿಕ ಹೋರಾಟ ಸಮಿತಿ ಕುಪ್ಪೆಟ್ಟಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮನವಿ ಮಾಡಿದ್ದಾರೆ.