ಆರೋಗ್ಯ ಭಾರತಿ ಮಂಗಳೂರು ಜಿಲ್ಲಾ ಸಮಿತಿಯ ಸಭೆಯು ಸೋಮವಾರ ತಾ 02.11.2026 ರಂದು ಮಂಗಳೂರು ಕದ್ರಿ ಕಂಬಳ ರಸ್ತೆಯಲ್ಲಿರುವ ವೇದಮಾರೋಗ್ಯ ಆಯುರ್ವೇದ ಆಸ್ಪತ್ರೆಯಲ್ಲಿ ಜರುಗಿತು.
ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ಮಹಾನಗರ ಸಂಘಚಾಲಕರಾದ ಡಾ ಸತೀಶ್ ರಾವ್, ಆರೋಗ್ಯ ಭಾರತಿಯ ಪ್ರಾಂತ ಉಪಾಧ್ಯಕ್ಷರು ಹಾಗೂ ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ ಮುರಳೀ ಮೋಹನ ಚೂಂತಾರು, ವಿಭಾಗ ಸಂಚಾಲಕರಾದ ಪುರುಷೋತ್ತಮ ದೇವಸ್ಯ, ಜಿಲ್ಲಾ ಅಧ್ಯಕ್ಷರಾದ ಡಾ ಈಶ್ವರ ಭಟ್ ಪಳ್ಳಾದೆ, ಜಿಲ್ಲಾ ಉಪಾಧ್ಯಕ್ಷರಾದ ಡಾ ಸಚಿನ್ ನಡ್ಕ, ಜಿಲ್ಲಾ ಕಾರ್ಯದರ್ಶಿ ಉಮೇಶ್ ಪ್ರಭು ಬನ್ನೂರು, ಜೊತೆ ಕಾರ್ಯದರ್ಶಿ ದಿನೇಶ್ ಚಂದ್ರಗಿರಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಕದ್ರಿ ವಿಕ್ರಮ್ ಉಪಸ್ಥಿತರಿದ್ದರು.
ಸಭೆಯಲ್ಲಿ ಸಮಿತಿ ವತಿಯಿಂದ ನಡೆಸುವ ಆರೋಗ್ಯ ಮಾಹಿತಿ ಕಾರ್ಯಕ್ರಮಗಳ ಅವಲೋಕನ ಮಾಡಲಾಯಿತು ಹಾಗೂ ಸಂಘಟನಾತ್ಮಕ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಇದೇ ತಿಂಗಳ 6 ಮತ್ತು 7ನೇ ತಾರೀಕುಗಳಲ್ಲಿ ಧನ್ವಂತರಿ ಜಯಂತಿ ಪ್ರಯುಕ್ತ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು.
ಆರೋಗ್ಯ ಭಾರತಿಯ ಪ್ರಾರ್ಥನೆಯೊಂದಿಗೆ ಆರಂಭವಾಗಿ ಶಾಂತಿ ಮಂತ್ರದೊಂದಿಗೆ ಸಭೆಯು ಮುಕ್ತಾಯವಾಯಿತು.

