ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕದ ಜನತೆಗೆ ಸಿಹಿ ಸುದ್ದಿ : ಗೃಹಲಕ್ಷ್ಮಿ ಯರಿಗೆ ದೀಪಾವಳಿ ಉಡುಗೊರೆ

0
62

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ 34, 35 ಹಾಗೂ 36ನೇ ಕಂತಿನ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000ರಂತೆ ಮೂರು ಕಂತುಗಳ ಹಣ ಬಿಡುಗಡೆಯಾದರೆ ಫಲಾನುಭವಿಗಳಿಗೆ ಒಟ್ಟು ₹6,000 ದೊರೆಯಲಿದೆ. ಈ ಮೂಲಕ ಮೂರು ವರ್ಷಗಳಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ಒಟ್ಟು ₹72,000 ಆರ್ಥಿಕ ನೆರವು ದೊರೆತಂತಾಗುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಯಂತೆ ಗೃಹಲಕ್ಷ್ಮಿ ಯೋಜನೆಯನ್ನು ಮುಂದುವರಿಸುವ ಮೂಲಕ ನುಡಿದಂತೆ ನಡೆದಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದೇ ರೀತಿ ರಾಜ್ಯದ ಪ್ರತಿಯೊಂದು ಗ್ರಾಮದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ವಿವಿಧ ಗ್ರಾಮಗಳಲ್ಲಿ ರಸ್ತೆ ನಿರ್ಮಾಣ ಹಾಗೂ ದುರಸ್ತಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಲಾಗುತ್ತಿದೆ. ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯೂ ನಡೆಯುತ್ತಿದ್ದು, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ.

ಸರ್ಕಾರದ ಖಜಾನೆಯ ಅನುದಾನದ ಮೂಲಕವೇ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಜನರಿಗೆ ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.