ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0
24

ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕಿನ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳು ಶಿಸ್ತನ್ನು ತಮ್ಮ ಜೀವನದಲ್ಲಿ ರೂಢಿಸಿಕೊಂಡು ಗುರು ಹಿರಿಯರಿಗೆ ಗೌರವ ಕೊಡಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆಸಲ್ಪಡುವ ಪ್ರತಿಯೊಂದು ಕಾರ್ಯಕ್ರಮಗಳು ಅರ್ಥಪೂರ್ಣವಾಗಿದ್ದು, ಜನಜಾಗೃತಿ ಮುಖೇನ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜಿಸಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸುತ್ತಿದ್ದಾರೆ.

ಮಾದಕ ವಸ್ತು ವ್ಯಸನದಿಂದ ಆರೋಗ್ಯ ಹಾನಿಯೊಂದಿಗೆ ಮಾನಸಿಕ ನೆಮ್ಮದಿ,ಗೌರವ ಎಲ್ಲವನ್ನೂ ಕಳೆದುಕೊಳ್ಳುವಂತಾಗುತ್ತದೆಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷರಾದ ಕಿರಣ್ ಹೆಗ್ಡೆ ರವರು ಮಕ್ಕಳು ಯಾವುದೇ ಆಕರ್ಷಣೆಗೆ ಒಳಗಾಗದೇ ಸತ್ಪ್ರಜೆಗಳಾಗಿ ಹೆತ್ತವರ ಋಣ ತೀರಿಸಬೇಕು ಎಂದರು. ಜನಜಾಗೃತಿ ವೇದಿಕೆ ಸದಸ್ಯರಾದ ತನಿಯಪ್ಪಗೌಡ,ಶಾಲಾ ಸಂಚಾಲಕರಾದ ಹಾಜಿ ಇಬ್ರಾಹಿಂ ರವರು ಉಪಸ್ಥಿತರಿದ್ದರು.ಮಾಣಿ ವಲಯದ ಮೇಲ್ವಿಚಾರಕಿ ಆಶಾಪಾರ್ವತಿ ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞಾ ವಿಧಿ ಬೋಧಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು..ಶಾಲೆಯ ಮುಖ್ಯ ಶಿಕ್ಷಕರಾದ ಚೆನ್ನಪ್ಪ ಗೌಡ ರವರು ಸ್ವಾಗತಿಸಿದರು. ಶಾಲೆಯ ಸಹಶಿಕ್ಷಕರು ಸಹಕರಿಸಿದರು.