ಶ್ರೀಕೃಷ್ಣ ಮಠದಲ್ಲಿ ದರ್ಶನಕ್ಕೆ ಬಂದ ವೃದ್ಧ ಕುಸಿದು ಗಂಭೀರ; ಆಸ್ಪತ್ರೆಗೆ ದಾಖಲು

0
1

ಉಡುಪಿ: ನಗರದ ಶ್ರೀಕೃಷ್ಣ ಮಠದಲ್ಲಿ ದರ್ಶನಕ್ಕೆ ಆಗಮಿಸಿದ್ದ ವೃದ್ಧರೊಬ್ಬರು ಕುಸಿದು ಬಿದ್ದು ಗಂಭೀರವಾಗಿ ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ.

ಕುಸಿದು ಬಿದ್ದಿರುವುದನ್ನು ಗಮನಿಸಿದ ಭಕ್ತರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳಕ್ಕೆ ಆಗಮಿಸಿ, ಭಕ್ತರ ಸಹಕಾರದೊಂದಿಗೆ ಗಾಯಾಳು ವೃದ್ಧರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಾಳು ವೃದ್ಧರನ್ನು ಶ್ರೀಶ ಉಪಾಧ್ಯಾಯ ಎಂದು ಗುರುತಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.