ತಡೆಗೋಡೆಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

0
67

ಉಡುಪಿ : ಕಾರ್ಕಳ– ಉಡುಪಿ ರಾಜ್ಯ ಹೆದ್ದಾರಿಯಲ್ಲಿ ಮೂಡುಬೆಳ್ಳೆ ಬಳಿ ಬೈಕ್ ವಾಹನ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ.

ಶಿರ್ವ ಕಡಂಬು ನಿವಾಸಿ ಸುಕೇಶ್ ಆಚಾರ್ಯ (24) ಮೃತಪಟ್ಟರು.

ಗಂಭೀರ ಗಾಯಗೊಂಡ ಇವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಶಿರ್ವದ ಆಟೋ ಎಲೆಕ್ಟಿಕಲ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಸುಕೇಶ ಬೆಳಗ್ಗೆ ಅಂಗಡಿ, ವಾಹನ ಪೂಜೆ ಮುಗಿಸಿ ಮನೆಗೆ ತೆರಳಿದ್ದು, ಬಳಿಕ ವಾಹನ ರಿಪೇರಿಗಾಗಿ ಕರೆ ಬಂದ ಹಿನ್ನೆಲೆಯಲ್ಲಿ ಮೂಡುಬೆಳ್ಳೆಗೆ ಬಂದಿದ್ದರು. ವಾಪಸ್ ಮನೆಗೆ ಹೋಗುವಾಗ ಈ ದುರ್ಘಟನೆ ನಡೆದಿದೆ.

ಮೃತ ಯುವಕ ತಂದೆ ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.