ಸುಂದರ್ ಶೆಟ್ಟಿಯವರಿಗೆ ‘ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ – 2026’ ಗೌರವ

0
11

ಶಾರ್ಜಾ: ಕರ್ನಾಟಕ ಸಂಘ ಶಾರ್ಜಾ ವತಿಯಿಂದ 24ನೇ ವಾರ್ಷಿಕೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಮಾಜಸೇವೆ ಮತ್ತು ಉದ್ಯಮ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಸುಂದರ್ ಶೆಟ್ಟಿಯವರಿಗೆ ಪ್ರತಿಷ್ಠಿತ ‘ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ – 2026’ ಪ್ರದಾನ ಮಾಡಲಾಗುತ್ತಿದೆ.

ಸಮಾಜಸೇವೆ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಈ ಬಾರಿಯ ಪ್ರಶಸ್ತಿಗೆ ಸುಂದರ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ಸಂಘ ಶಾರ್ಜಾ (Indian Association Sharjah ಆಶ್ರಯದಲ್ಲಿ) ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಿದೆ.

ನವೆಂಬರ್ 15, 2026ರಂದು ಮಧ್ಯಾಹ್ನ 3:30ರಿಂದ ಅಜ್ಮಾನ್‌ನ ನಾರ್ತ್ ಗೇಟ್ ಬ್ರಿಟಿಷ್ ಸ್ಕೂಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ಸಂಘದ 24ನೇ ವಾರ್ಷಿಕೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.

ವಿದೇಶದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿಯ ಗೌರವವನ್ನು ಎತ್ತಿಹಿಡಿಯುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.